Karnataka Colleges Closure Extended : ಮುಂಜಾಗ್ರತಾ ಕ್ರಮವಾಗಿ ಕಾಲೇಜುಗಳಿಗೆ ಫೆ.16ರ ವರೆಗೆ ರಜೆ ವಿಸ್ತರಣೆ

ಹಿಜಾಬ್ ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ನೀಡಲಾಗಿದ್ದ 3 ದಿನಗಳ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ವಿಸ್ತರಣೆ ಮಾಡಲಾಗಿದೆ. ರಾಜ್ಯಾದ್ಯಂತ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.

ಹಿಜಾಬ್ ವಿವಾದ : ಫೆ.16ರ ವರೆಗೆ ಕಾಲೇಜುಗಳಿಗೆ ರಜೆ ವಿಸ್ತರಣೆ

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಮತ್ತು ಡಿಪ್ಲೊಮ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ಹೇಳಿದೆ.

ಹಿಜಾಬ್ ವಿಚಾರಚಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೇ ಸೋಮವಾರದಿಂದ 10ನೇ ತರಗತಿವರೆಗಿನ ಶಾಲೆಗಳು ಆರಂಭವಾಗಲಿದ್ದು, ಶಾಲಾ ಆವರಣಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು ಮಾಡಿದ್ದಾರೆ. ಹಿಜಾಬ್ ಸಂಬಂಧ ಹೆಚ್ಚು ಗಲಾಟೆಯಾದ ಜಿಲ್ಲೆಗಳಲ್ಲಿ ಹೆಚ್ಚುವರಿ ಭದ್ರತೆ ನೀಡಿ ಎಂದು ಅವರು ಆದೇಶಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ 'ಈ ಅವಧಿಯಲ್ಲಿ ಆನ್‌ಲೈನ್‌ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಿಗದಿಯಂತೆಯೇ ಪರೀಕ್ಷೆಗಳು ನಡೆಯಲಿವೆ' ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ಕಾಲೇಜು ಪುನಾರಂಭದ ಬಗ್ಗೆ ಫೆ.16ರೊಳಗೆ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Due to hijab controversy in karnataka, government extended holidays for colleges till february 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X