Holiday For Schools In Karnataka : ಮಳೆ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅಂಗನವಾಡಿಗಳು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 
ವರುಣನ ಆರ್ಭಟಕ್ಕೆ ರಾಜ್ಯದ 7 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ನಿರಂತರ ಮಳೆಯಾರುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ನಂತರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶುಕ್ರವಾರ ಮತ್ತು ಶನಿವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳಿಗೆ 19 ಮತ್ತು 20ರಂದು ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka school education department announced holiday for schools in 7 districts of karnataka due to heavy rain.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X