
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಸಿಆರ್‌ಪಿ ಕ್ಲರ್ಕ್-X ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪ್ರಮುಖ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಐಬಿಪಿಎಸ್ 2557 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 23,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.
ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Click here to view your result of onine main examination for CRP clerks-X" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Click here to view your result of onine main examination for CRP clerks-X" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 5: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











