IBPS CRP Clerk XI Prelims Result 2021 : ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್‌ಪಿ ಕ್ಲರ್ಕ್ XI ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 7858 ಸಿಆರ್‌ಪಿ ಕ್ಲರ್ಕ್ XI ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅಕ್ಟೋಬರ್ 7,2021 ರಿಂದ ಅಕ್ಟೋಬರ್ 27,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಕ್ಲರ್ಕ್ XI ಹುದ್ದೆಗಳಿಗೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಕ್ಲರ್ಕ್ XI ಹುದ್ದೆಗಳಿಗೆ ಜುಲೈ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿತ್ತು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಕ್ಲರ್ಕ್ XI ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ. ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಆಗಸ್ಟ್ 28,29 ಮತ್ತು ನವೆಂಬರ್ 4,2021ವರೆಗೆ ನಡೆಸಲಾಗಿದೆ. ಇದೀಗ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of Online Preliminary Examination for CRP Clerk XI " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS released CRP clerk XI prelims results. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+