IBPS CRP Clerk XII Mains Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ಸಿಆರ್‌ಪಿ ಕ್ಲರ್ಕ್ XII ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಒಟ್ಟು 6,000ಕ್ಕೂ ಅಧಿಕ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 1,2022 ರಿಂದ ಜುಲೈ 21,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 7,2022ರಂದು ನಡೆಸಲಾಗಿದ್ದು, ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯನ್ನು ಅಕ್ಟೋಬರ್ 8,2022ರಂದು ನಿಗದಿಪಡಿಸಲಾಗಿದ್ದು, ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online Main exam call letter for CRP Clerk XII" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ

ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS released main examination 2022 admit card for CRP Clerk XII posts. Here is how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X