ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಸಿಆರ್‌ಪಿ ಕ್ಲರ್ಕ್ XII ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಒಟ್ಟು 6,000 ಅಧಿಕ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 1,2022 ರಿಂದ ಜುಲೈ 21,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 7,2022ರಂದು ನಡೆಸಲಾಗಿದ್ದು, ಇದೀಗ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Click here to view your result of onine preliminary examination for CRP Clerks-XII" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











