IBPS Clerk admit card 2020 : ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2020ರ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪ್ರವೇಶ ಪತ್ರ ರಿಲೀಸ್

ಐಬಿಪಿಎಸ್ ಒಟ್ಟು 2557 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಇಂದು ಬಿಡುಗಡೆ ಮಾಡಿದೆ.

ಐಬಿಪಿಎಸ್ ಪ್ರಿಲಿಮಿನರಿ ಪರೀಕ್ಷೆಯು ಡಿಸೆಂಬರ್ 5, 12 ಮತ್ತು 13 ರಂದು ನಡೆಯಲಿದ್ದು,ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್‌ 2020ರ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download preliminary exam call letter for clerk posts" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS 2020 released online preliminary examination admit card for CRP clerks X posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X