ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ XII ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ್ ಫಲಿತಾಂಶವನ್ನು ವೀಕ್ಷಿಸಬಹುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ 6000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 2 ರಿಂದ 22ರೊಳಗೆ ಅರ್ಜಿಯನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ. ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಅಕ್ಟೋಬರ್ ೧೬ರಂದು ನಡೆಸಲಾಗಿದ್ದು, ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ :
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of Online preliminary Examination for CRP-PO/MT-XII " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











