ಐಬಿಪಿಎಸ್‌ 2019 : ಸಿಬ್ಬಂದಿ ಸಹಾಯಕ ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಬಿಪಿಎಸ್‌ ಆರ್‌ಆರ್‌ಬಿ ಸಿಬ್ಬಂದಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಖಾಲಿಯಿರುವ ಗ್ರೂಪ್‌ "ಬಿ" ಸಿಬ್ಬಂದಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಜುಲೈ 4,2019ರೊಳಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಐಬಿಪಿಎಸ್‌ ನೇಮಕಾತಿಯ ಸಿಬ್ಬಂದಿ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಆಗಸ್ಟ್ 17,18 ಮತ್ತು 25,2019ರಂದು ಪ್ರಿಲಿಮಿನರಿ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳು ಜುಲೈ 26 ರಿಂದ ಆಗಸ್ಟ್ 18,2019ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್‌ ಆರ್‌ಆರ್‌ಬಿ ಸಿಬ್ಬಂದಿ ಸಹಾಯಕ ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಬಿಪಿಎಸ್‌ ನ ಅಧಿಕೃತ ವೆಬ್ ಸೈಟ್ https://www.ibps.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಲಭ್ಯವಿರುವ "Click Here to Download Online Preliminary Exam Call Letter For CRP-RRBs VIII-Office Assistant" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Click here to Download Online Preliminary Exam Call Letter for CRP-RRBs VIII-Office Assistant (Multipurpose)" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್‌ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS CRP RRB released the preliminary online exam admit cards for office assistant posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+