IBPS CRP RRB XI Officer Mains Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಆರ್‌ಆರ್‌ಬಿ XI ಅಧಿಕಾರಿ (ಸ್ಕೇಲ್ I) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.

ಐಬಿಪಿಎಸ್ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

ಆನ್‌ಲೈನ್ ಮುಖ್ಯ ಪರೀಕ್ಷೆಯನ್ನು ಅಕ್ಟೋಬರ್ 1,2022ರಂದು ನಡೆಸಲಿದ್ದು, ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online Main exam call letter for CRP RRB-XI Officer Sacle I" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ

ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IBPS released main examination 2022 admit card for CRP RRB XI office scale I posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X