IBPS Specialist Officer XI Interview Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸ್ಪೆಷಲಿಸ್ಟ್ ಅಧಿಕಾರಿ XI ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 1828 ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನವೆಂಬರ್ 23,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಸ್ಪೆಷಲಿಸ್ಟ್ ಅಧಿಕಾರಿ XI ಹುದ್ದೆಗಳಿಗೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಸ್ಪೆಷಲಿಸ್ಟ್ ಅಧಿಕಾರಿ XI ಹುದ್ದೆಗಳಿಗೆ ನವೆಂಬರ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿತ್ತು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ. ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಡಿಸೆಂಬರ್ 26,2021ರಂದು ನಡೆಸಲಾಗಿದ್ದು, ಫಲಿತಾಂಶವನ್ನು ಕೂಡ ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಯನ್ನು ಜನವರಿ 30,2022ರಂದು ನಡೆಸಲಾಗಿದ್ದು, ಈಗಾಗಲೇ ಪರೀಕ್ಷಾ ಫಲಿತಾಂಶವು ಪ್ರಕಟವಾಗಿದೆ. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಇದೀಗ ಸಂದರ್ಶನ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂದರ್ಶನ ಸುತ್ತಿಗೆ ಅರ್ಹರಾದ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download interview call letter for Specialist Officer-XI" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಐಬಿಪಿಎಸ್ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ಗುರುತಿನ ಚೀಟಿ ಹಾಗೂ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released interview admit card 2022 for specialist officer-XI posts. Interested candidates can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+