IBPS PO/MT Mains Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಪಿಒ/ಎಂಟಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 4,135 ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅಕ್ಟೋಬರ್ 20,2021 ರಿಂದ ನವೆಂಬರ್ 10,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿತ್ತು.

ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿತ್ತು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.

ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಡಿಸೆಂಬರ್ 4,2021 ರಿಂದ ಡಿಸೆಂಬರ್ 11,2021ರ ವರೆಗೆ ನಡೆಸಲಾಗಿತ್ತು. ವರದಿಯ ಪ್ರಕಾರ ಪರೀಕ್ಷೆಗೆ 5 ಲಕ್ಷ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು. ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಜನವರಿ 5,2022ರಂದು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಇದೀಗ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online main exam call letter for PO/MT-XI" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಐಬಿಪಿಎಸ್ ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released main examination 2021 admit card for probationary officer/management trainee posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+