ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2019-20ರ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಸಂದರ್ಶನಕ್ಕೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಫೆಬ್ರವರಿ 6,2020ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ 2019-20ರ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download interview call letter for
CRP PO/MT-IX" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಸರ್ಕಾರದಿಂದ ಗುರುತಿಸಲ್ಪಟ್ಟ ಯಾವುದಾದರೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಸಂದರ್ಶನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











