ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2019ರ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಒಟ್ಟು 4336 ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 28,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆಯೇ ಈಗಾಗಲೇ ಪ್ರಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.
ಐಬಿಪಿಎಸ್ ಪ್ರಮುಖ ಪರೀಕ್ಷೆಯು ನವೆಂಬರ್ 30,2019ರಂದು ನಡೆಯಲಿದ್ದು, ಪರೀಕ್ಷೆಯ ಫಲಿತಾಂಶವು ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಳ್ಳಲಿದೆ. ಪ್ರಮುಖ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ ಪಿಓ 2019ರ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download online main exam call letter for probationary officers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಪ್ರಮುಖ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳಬಹುದು.


Click it and Unblock the Notifications











