ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್ಪಿ ಕ್ಲರ್ಕ್-XI ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಒಟ್ಟು 7,858 ಕ್ಲರ್ಕ್-XI ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಕ್ಟೋಬರ್ 27,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಡಿಸೆಂಬರ್ ನಲ್ಲಿ ನಿಗದಿಪಡಿಸಲಾಗಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online preliminary exam call letter for CRP -Clerks-XI" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications