IBPS CRP PO/MT Prelims Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್ಪಿ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ-XI ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಎಸ್‌ಓ/ಎಂಟಿ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

ಐಬಿಪಿಎಸ್ ಒಟ್ಟು 4,135 ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ-XI ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ನವೆಂಬರ್ 10,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಡಿಸೆಂಬರ್ 11,2021ರಂದು ನಿಗದಿಪಡಿಸಲಾಗಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಇಂದು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online preliminary exam call letter for CRP -PO/MT-XI" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released preliminary exam 2021 admit card for crp probationary officer/management trainee -XI posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+