ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ಪರೀಕ್ಷೆ ಮತ್ತು ಸಂದರ್ಶನ ಪ್ರಕ್ರಿಯೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಐಬಿಪಿಎಸ್ ಪ್ರಮುಖ ಪರೀಕ್ಷೆ ಮತ್ತು ಸಂದರ್ಶನ ಪ್ರಕ್ರಿಯೆಯು ಜನವರಿ/ಫೆಬ್ರವರಿ 2020ರಲ್ಲಿ ನಡೆದಿದ್ದು, ಕೊರೋನಾದಿಂದಾಗಿ ತಡವಾಗಿ ಫಲಿತಾಂಶವನ್ನು ಪ್ರಕಟ ಮಾಡಲಾಗಿರುತ್ತದೆ. ಅಭ್ಯರ್ಥಿಗಳಿಗೆ ಫಲಿತಾಂಶವನ್ನು ವೀಕ್ಷಿಸಲು ಜೂನ್ 30,2020ರ ವರೆಗೆ ಅವಕಾಶ ನೀಡಲಾಗಿರುತ್ತದೆ.
ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದು ಇಲ್ಲಿ ತಿಳಿಯಿರಿ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ IBPS CRP -PO/MT-IX ಆನ್‌ಲೈನ್ ಪ್ರಮುಖ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಕ್ಯಾಪ್ಚಾ ನೀಡಿ ಸಬ್‌ಮಿಟ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಿ ಅದರ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











