IBPS CRP PO/MT XII Prelims Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್ಪಿ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ-‍XII ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಪಿಓ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 6432 ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 2,2022 ರಿಂದ ಆಗಸ್ಟ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಗಸ್ಟ್ 1,2022ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ವಯೋಮಿತಿ ಸಡಿಲಿಕೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.

ಐಬಿಪಿಎಸ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online preliminary exam call letter for CRP -PO/MT-XII " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS released preliminary exam admit card 2022 for CRP PO/MT-XII posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X