ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2021ನೇ ಸಾಲಿನ ನೇಮಕಾತಿಯ ಸಿಆರ್‌ಪಿ ಆರ್‌ಆರ್‌ಬಿ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಒಟ್ಟು 10,368 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 28,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಆಗಸ್ಟ್ ನಲ್ಲಿ ಪ್ರಿಲಿಮಿನರಿ ಪರೀಕ್ಷೆಯು ನಡೆದಿದ್ದು, ಈಗಾಗಲೇ ಫಲಿತಾಂಶ ಕೂಡ ಪ್ರಕಟವಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹತೆಯನ್ನು ಪಡೆದಿರುತ್ತಾರೆ.
ಐಬಿಪಿಎಸ್ ಸಿಆರ್‌ಪಿ ಆರ್‌ಆರ್‌ಬಿ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯು ಇದೇ ಅಕ್ಟೋಬರ್ 17,2021ರಂದು ದೇಶದೆಲ್ಲೆಡೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 200 ಅಂಕಗಳಿಗೆ 2 ಗಂಟೆಗಳ ಅವಧಿಯಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಿದ್ದು, ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ ಆರ್‌ಆರ್‌ಬಿ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download your Online Main Exam Call letter for Recruitment of Group B Office Assistant (Multipurpose)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಸ್ಟೆಪ್ 6 : ಪ್ರವೇಶ ಪತ್ರದಲ್ಲಿ ಪರೀಕ್ಷೆ ದಿನಾಂಕ, ಸಮಯ, ಆಯಾ ಪರೀಕ್ಷಾರ್ಥಿಗಳ ಪರೀಕ್ಷಾ ಕೇಂದ್ರ ಮತ್ತಿತರ ಖಾಸಗಿ ಮಾಹಿತಿಗಳು ಇರುತ್ತವೆ. ಡೌನ್‌ಲೋಡ್ ಮಾಡಿಕೊಂಡ ಬಳಿಕ ಸರಿಯಾಗಿ ಪರಿಶೀಲನೆ ಮಾಡಿಕೊಂಡು, ತಪ್ಪಿದ್ದರೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕಾಗುತ್ತದೆ.
ಐಬಿಪಿಎಸ್ ಪ್ರಮುಖ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪಡೆಯಬಹುದು.
ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











