ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಅಧಿಕಾರಿ (ಸ್ಕೇಲ್ II ಮತ್ತು III) ಹುದ್ದೆಗಳ ಸ್ಕೋರ್ ಕಾರ್ಡ್ ಮತ್ತು ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಅಕ್ಟೋಬರ್ 18,2020ರಂದು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಸ್ಕೋರ್ ಅನ್ನು ಪರಿಶೀಲಿಸಿಕೊಳ್ಳಬಹುದು. ಅಭ್ಯರ್ಥಿಗಳು ಸ್ಕೋರ್ ಅನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ ಸ್ಕೋರ್ ಚೆಕ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ "IBPS RRB IX-Officer Scale II And III" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಸ್ಕೋರ್ಡ್ ಕಾರ್ಡ್ ಅನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ