IBPS RRB X Officer Interview Admit Card 2021 : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2021ನೇ ಸಾಲಿನ ನೇಮಕಾತಿಯ ಸಿಆರ್‌ಪಿ ಆರ್‌ಆರ್‌ಬಿ X ಅಧಿಕಾರಿ (ಸ್ಕೇಲ್ I, II, III) ಹುದ್ದೆಗಳ ಸಂದರ್ಶನ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಂದರ್ಶನಕ್ಕೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 
ಐಬಿಪಿಎಸ್ ಆರ್‌ಆರ್‌ಬಿ  X ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಐಬಿಪಿಎಸ್ ಒಟ್ಟು 10,368 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 28,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ , ಪ್ರಮುಖ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುವುದು. ಆಗಸ್ಟ್ ನಲ್ಲಿ ಪ್ರಿಲಿಮಿನರಿ ಪರೀಕ್ಷೆಯು ನಡೆದಿದ್ದು, ಈಗಾಗಲೇ ಫಲಿತಾಂಶ ಕೂಡ ಪ್ರಕಟವಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಮುಖ ಪರೀಕ್ಷೆಗೆ ಹಾಜರಾಗಿರುತ್ತಾರೆ. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಇದೀಗ ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವು ಅಕ್ಟೋಬರ್ /ನವೆಂಬರ್ 2021ರಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್‌ ಆರ್‌ಆರ್‌ಬಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ.

ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download your interview Call letter for Recruitment of RRB X Officers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಸ್ಟೆಪ್ 6 : ಪ್ರವೇಶ ಪತ್ರದಲ್ಲಿ ಪರೀಕ್ಷೆ ದಿನಾಂಕ, ಸಮಯ, ಆಯಾ ಪರೀಕ್ಷಾರ್ಥಿಗಳ ಪರೀಕ್ಷಾ ಕೇಂದ್ರ ಮತ್ತಿತರ ಖಾಸಗಿ ಮಾಹಿತಿಗಳು ಇರುತ್ತವೆ. ಡೌನ್​ಲೋಡ್​ ಮಾಡಿಕೊಂಡ ಬಳಿಕ ಸರಿಯಾಗಿ ಪರಿಶೀಲನೆ ಮಾಡಿಕೊಂಡು, ತಪ್ಪಿದ್ದರೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕಾಗುತ್ತದೆ.

 

ಐಬಿಪಿಎಸ್ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪಡೆಯಬಹುದು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS released interview admit card for RRB X officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X