ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2019-20ರ ನೇಮಕಾತಿಯ ಸ್ಟೆಷಲಿಸ್ಟ್ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಸಂದರ್ಶನ ಸುತ್ತಿಗೆ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಎಸ್‌ಓ ಹುದ್ದೆಗಳಿಗೆ ಪ್ರಮುಖ ಪರೀಕ್ಷೆಯನ್ನು ಜನವರಿ 25,2020ರಂದು ನಡೆಸಲಾಗಿದ್ದು, ಪರೀಕ್ಷೆಯ ಫಲಿತಾಂಶವನ್ನು ಫೆಬ್ರವರಿ 5,2020ರಂದು ಪ್ರಕಟ ಮಾಡಲಾಗಿರುತ್ತದೆ. ಪರೀಕ್ಷೆಯ ಸ್ಕೋರ್ ಕಾರ್ಡ್ ಅನ್ನು ಫೆಬ್ರವರಿ 12,2020 ರಂದು ಬಿಡುಗಡೆ ಮಾಡಲಾಗಿದ್ದು, ಪ್ರಮುಖ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನ ಸುತ್ತಿಗೆ ಅರ್ಹತೆಯನ್ನು ಪಡೆದಿರುತ್ತಾರೆ.
ಸಂದರ್ಶನ ಸುತ್ತಿಗೆ ಹಾಜರಾಗುವ ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ 2019-20ರ ಎಸ್‌ಓ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download interview call letter for CRP SPL-IX" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಸ್ಟೆಷಲಿಸ್ಟ್ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











