ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆಯಲು ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನುಸಾರ ನಡೆದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ರಿಲೀಸ್ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಪ್ರಮುಖ ಪರೀಕ್ಷೆಯು ಇದೇ ಜನವರಿ 24,2021ರಂದು ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click Here To Download Online Main Exam Admit Card for CRP SPL-X" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











