
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಸ್ಪೆಷಲಿಸ್ಟ್ ಅಧಿಕಾರಿ (ಸಿಆರ್‌ಪಿ ಎಸ್‌ಪಿಎಲ್-X) ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಐಬಿಪಿಎಸ್ ಒಟ್ಟು 647 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 23,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.
ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಮುಖ್ಯ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು
ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











