IBPS CRP Specialist Officer XI Mains Result 2022 : ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್ ತಜ್ಞ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷಾ ಫಲಿತಾಂಶ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 1828 ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನವೆಂಬರ್ 23,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳಿಗೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳಿಗೆ ನವೆಂಬರ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿತ್ತು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನೇಮಕಾತಿಯ ಸಿಆರ್‌ಪಿ ತಜ್ಞ ಅಧಿಕಾರಿ XI ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ. ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಡಿಸೆಂಬರ್ 26,2021ರಂದು ನಡೆಸಲಾಗಿದ್ದು, ಫಲಿತಾಂಶವನ್ನು ಕೂಡ ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಯನ್ನು ಜನವರಿ 30,2022ರಂದು ನಡೆಸಲಾಗಿದ್ದು, ಪರೀಕ್ಷಾ ಫಲಿತಾಂಶವು ಇಂದು ಪ್ರಕಟವಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of IBPS SO XI Mains Result 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IBPS released CRP specialist officer XI mains results. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X