ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ ವಿಶೇಷ ಅಧಿಕಾರಿ XI ಹುದ್ದೆಗಳ ಸ್ಕೋರ್ ಕಾರ್ಡ್ ಅನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಸ್ಕೋರ್ ಕಾರ್ಡ್ ಜೊತೆಗೆ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಇದೀಗ ಸ್ಕೋರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಸ್ಕೋರ್ ಕಾರ್ಡ್ ಡೌನ್‌ಲೋಡ್ ಮಾಡಲು ಮಾರ್ಚ್ 30ರ ವರೆಗೆ ಅವಕಾಶವಿರುತ್ತದೆ.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ 1828 ಸಿಆರ್‌ಪಿ ವಿಶೇಷ ಅಧಿಕಾರಿ XI ಹುದ್ದೆಗಳಿಗೆ ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನವೆಂಬರ್ 23,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಕಾಲೇಜು ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ನವೆಂಬರ್ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿತ್ತು.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ ನೇಮಕಾತಿಯ ಸಿಆರ್‌ಪಿ ವಿಶೇಷ ಅಧಿಕಾರಿ XI ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ತದನಂತರ ಸಂದರ್ಶನ ಸುತ್ತಿಗೆ ಹಾಜರಾಗಬೇಕಿರುತ್ತದೆ.
ಅಭ್ಯರ್ಥಿಗಳು ಸ್ಕೋರ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ :
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Score Display Of Qualified Candidates Called For Interview" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಸ್ಕೋರ್ ಕಾರ್ಡ್ ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.