ಐಡಿಬಿಐ 2019 ಎಕ್ಸಿಕ್ಯುಟಿವ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ . ಐಡಿಬಿಐ 300 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 15 ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್‌ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಮೇ 6 ರಿಂದ ಮೇ 16 ,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟಿವ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.idbi.com/index.asp ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Cureent Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ "Recruitment Of Executive 2019" ನ ಕೆಳಗೆ ಕಾಣಿಸುವ "Call Leteer For Online Examination" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ Register Number ಮತ್ತು ನಿಮ್ಮ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪರೀಕ್ಷೆಯ ಬಗೆಗೆ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IDBI has released the admit cards for executive posts Examination on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+