ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನಡೆಸಲಾಗುವ ಪ್ರಿ ಎಕ್ಸಾಂ ಟ್ರೈನಿಂಗ್ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಮಾಡಲಾಗಿದೆ . ಐಡಿಬಿಐ ಬ್ಯಾಂಕ್ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 15,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆy ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪ್ರಿ ಎಕ್ಸಾಂ ಟ್ರೈನಿಂಗ್ ಗಾಗಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಏಪ್ರಿಲ್ 24,2019 ರಿಂದ ಮೇ 13, 2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.idbi.com/index.asp ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Cureent Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ "Recruitment Of Assistant Manager 2019" ನ ಕೆಳಗೆ ಕಾಣಿಸುವ "Call Leteer For Pre- Examination Training (PET)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ "Register Number" ಮತ್ತು ನಿಮ್ಮ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











