ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಡಿಬಿಐ ಬ್ಯಾಂಕ್ ಒಟ್ಟು 650 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 22,2021ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ತಮ್ಮ ಪ್ರವೇಶ ಪತ್ರವನ್ನು ಆಗಸ್ಟ್ 27 ರಿಂದ ಸೆಪ್ಟೆಂಬರ್ 4,2021ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟಿವ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1: ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.idbi.com/index.asp ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Cureent Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ "Recruitment Of Assistant Manager 2021" ನ ಕೆಳಗೆ ಕಾಣಿಸುವ "Call Leteer For Online Examination" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ Register Number ಮತ್ತು ನಿಮ್ಮ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











