ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಡಿಬಿಐ ಬ್ಯಾಂಕ್ ಒಟ್ಟು 1544 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 3,2022 ರಿಂದ ಜೂನ್ 17,2022ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಏಪ್ರಿಲ್ 1,2022ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅವಕಾಶ ನೀಡಲಾಗಿತ್ತು. ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಐಡಿಬಿಐ ಬ್ಯಾಂಕ್ ನೇಮಕಾತಿಯ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/- ರಿಂದ 34,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಇದೀಗ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟಿವ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1: ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.idbi.com/index.asp ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Cureent Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ "Recruitment Of Executive 2022" ನ ಕೆಳಗೆ ಕಾಣಿಸುವ "Call Letter For Online Examination" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ Register Number ಮತ್ತು ನಿಮ್ಮ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











