ಐಡಿಬಿಐ 2019: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್‌ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಐಡಿಬಿಐ ಒಟ್ಟು 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 7,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್‌ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಆನ್‌ಲೈನ್‌ ಪರೀಕ್ಷೆಯು ಜುಲೈ 28,2019ರಂದು ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.idbi.com/index.asp ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Current Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ "Recruitment Notification for Admissions to Manipal School of Banking-2019-20" ನ ಕೆಳಗೆ ಕಾಣಿಸುವ "Call Letter For Online Exam" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ Register Number / Roll No ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

For Quick Alerts
ALLOW NOTIFICATIONS  
For Daily Alerts

English summary
IDBI has released the CBT admit cards for assistant manager posts Examination on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X