
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೊ) ಜೂನ್ ಟರ್ಮ್ ಎಂಡ್ ಎಕ್ಸಾಮಿನೇಷನ್ 2021ರ ಯುಜಿ, ಪಿಜಿ, ಡಿಪ್ಲೋಮಾ ಮತ್ತು ಸರ್ಟಿಫಿಕೇಶನ್ ಕೋರ್ಸ್‌ಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇಗ್ನೋ ಜೂನ್ ಟಿಇಇ ಪರೀಕ್ಷೆಯು ಆಗಸ್ಟ್ 3 ರಂದು ಪ್ರಾರಂಭವಾಗಲಿದ್ದು ಸೆಪ್ಟೆಂಬರ್ 9, 2021 ರವರೆಗೆ ನಡೆಯಲಿದೆ. ಪರೀಕ್ಷೆಯನ್ನು ಎರಡು ಶಿಫ್ಟ್‌ಗಳಲ್ಲಿ ನಡೆಸಲಾಗುವುದು. ಮೊದಲ ಶಿಫ್ಟ್ ಅನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಎರಡನೇ ಶಿಫ್ಟ್ ಅನ್ನು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ನಡೆಸಲಾಗುವುದು.
ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪರಿಶೀಲಿಸುತ್ತಿರತಕ್ಕದ್ದು. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್‌ಲೋಡ್ ಮಾಡಿಕೊಳ್ಳಬೇಕು ಹಾಗೂ ಅದರಲ್ಲಿ ಮುದ್ರಿಸಲಾದ ಸೂಚನೆಗಳನ್ನು ಮತ್ತು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಓದಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇಶಾದ್ಯಂತ ಕೋವಿಡ್ ಹರಡಿರುವ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ತಾವು ಬಯಸಿದ ಪರೀಕ್ಷಾ ಕೇಂದ್ರವನ್ನು ಪಡೆಯದಿದ್ದಲ್ಲಿ, ಅಂತಹ ವಿದ್ಯಾರ್ಥಿಗಳಿಗೆ ತಮ್ಮ ಹಾಲ್ ಟಿಕೆಟ್‌ನಲ್ಲಿ ಉಲ್ಲೇಖಿಸಲಾದ ಹತ್ತಿರದ ಪರೀಕ್ಷಾ ಕೇಂದ್ರದಲ್ಲಿ ವಸತಿ ಕಲ್ಪಿಸಲು ವಿಶ್ವವಿದ್ಯಾಲಯ ಪ್ರಯತ್ನಿಸುತ್ತಿದೆ ಎಂದು ಇಗ್ನೋ ಹೇಳಿದೆ.
ಅಭ್ಯರ್ಥಿಗಳು ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











