ದ್ವಿತೀಯ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ವಿವರ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಮೇ 12ರಂದು ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಫರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿ ಜೂನ್/ಜುಲೈನಲ್ಲಿ  ಸಪ್ಲಿಮೆಂಟರಿ ಪರೀಕ್ಷೆ ನಡೆಸಲಾಗುತ್ತಿದ್ದು, ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಶುಲ್ಕ ಪಾವತಿಸಿ ಪರೀಕ್ಷೆ ತೆಗೆದುಕೊಳ್ಳಬಹುದಾಗಿದೆ.

ಪರೀಕ್ಷಾ ಶುಲ್ಕ

  • ಒಂದು ವಿಷಯಕ್ಕೆ: ರೂ.101/-
  • ಎರಡು ವಿಷಯಕ್ಕೆ: ರೂ.201/-
  • ಮೂರು ಅಥವಾ ಹೆಚ್ಚಿನ ವಿಷಯಕ್ಕೆ:ರೂ.302/-
  • ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ವಿವರ

ಸೂಚನೆ

ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಲ್ಲಿಸಬೇಕಾದ ಅಂಕ ಪಟ್ಟಿ ಶುಲ್ಕ: ರೂ.36/- [ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ]

ಫಲಿತಾಂಶ ತಿರಸ್ಕರಿಸಲು ಅವಕಾಶ

ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಉತ್ತೀರ್ಣರಾದ ವಿದ್ಯಾರ್ಥಿಗಳು ನಿಯಮಾನುಸಾರ ಫಲಿತಾಂಶವನ್ನು ತಿರಸ್ಕರಿಸಿ ನಿಗದಿತ ಶುಲ್ಕ ಪಾವತಿಸಿ ಮತ್ತೆ ಪರೀಕ್ಷೆ ಬರೆಯಬಹುದಾಗಿದೆ. [132 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ]

ಫಲಿತಾಂಶ ತಿರಸ್ಕರಣಾ ಶುಲ್ಕ

ಪ್ರಥಮ ಬಾರಿಗೆ ಒಂದು ವಿಷಯಕ್ಕೆ:ರೂ.126/-
ದ್ವಿತೀಯ ಹಾಗೂ ಅಂತಿಮ ಬಾರಿಗೆ ಒಂದು ವಿಷಯಕ್ಕೆ:ರೂ.252/-

ಪ್ರಮುಖ ದಿನಾಂಕಗಳು

  • ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಕಡೆಯ ದಿನಾಂಕ: 23-05-2017
  • ಕಾಲೇಜಿನವರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ದಿನಾಂಕ: 24-05-2017
  • ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ: 25-05-2017
  • ಸಪ್ಲಿಮೆಂಟರಿ ಪರೀಕ್ಷೆ ನಡೆಯುವ ದಿನಾಂಕ 28-06-2017 ರಿಂದ 08-07-2017

For Quick Alerts
ALLOW NOTIFICATIONS  
For Daily Alerts

    English summary
    According to the press notification released by the department- The Karnataka II PUC Supplementary examination will be held from 28 June 2017 to 8 July 2017.

    ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
    Kannada Careerindia

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more