IIMB Entrepreneurship Training : ಪದವೀಧರ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಬೆಂಗಳೂರಿನ ಕಾರ್ಯನಿರ್ವಾಹಕ ಶಿಕ್ಷಣ ಕಾರ್ಯಕ್ರಮಗಳು (EEPs) ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯಗಳಿಗೆ ಸೇರಿದ ಮಹಿಳಾ ಪದವೀಧರರಿಗೆ ಉದ್ಯಮಶೀಲತಾ ತರಬೇತಿ ಪ್ರಮಾಣಪತ್ರ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಐಐಎಂಬಿ ತರಬೇತಿ ಕಾರ್ಯಕ್ರಮದ ಮೊದಲ ಬ್ಯಾಚ್ ಆಗಸ್ಟ್ 16, 2022 ರಂದು ಪ್ರಾರಂಭವಾಗಲಿದೆ ಎಂದು ಸಂಸ್ಥೆ ಹೇಳಿದ್ದು, ಆಸಕ್ತರು ಅರ್ಜಿಯನ್ನು ಹಾಕಬಹುದು.

 
ಐಐಎಂ ಬೆಂಗಳೂರು : ಉದ್ಯಮಶೀಲತಾ ಪ್ರಮಾಣ ಪತ್ರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

IIM ಬೆಂಗಳೂರು ಅಭಿವೃದ್ಧಿಪಡಿಸಿದ ಕಾರ್ಯಕ್ರಮದ ಉದ್ದೇಶವು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ತಮ್ಮ ವ್ಯವಹಾರಗಳನ್ನು ಬೆಳೆಸಲು ಸಹಾಯ ಮಾಡುವುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು :

ಕರ್ನಾಟಕ ಸರ್ಕಾರವು ಪ್ರಾಯೋಜಿಸಿರುವ IIM ಬೆಂಗಳೂರು ಉದ್ಯಮಶೀಲತಾ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು SC ಅಥವಾ ST ವರ್ಗಕ್ಕೆ ಸೇರಿದ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಕರ್ನಾಟಕದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ :

ಕಾರ್ಯಕ್ರಮಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂಸ್ಥೆಯು ಆನ್‌ಲೈನ್ ಆಪ್ಟಿಟ್ಯೂಡ್ ಪರೀಕ್ಷೆಯನ್ನು ನಡೆಸುತ್ತದೆ. ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ 300 ಅಭ್ಯರ್ಥಿಗಳನ್ನು ಐಐಎಂ ಬೆಂಗಳೂರು ಪ್ರಮಾಣಪತ್ರ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುತ್ತದೆ.

ಕಾರ್ಯಕ್ರಮದ ಅವಧಿ :

ಐಐಎಂಬಿ ಪ್ರಮಾಣಪತ್ರ ಕಾರ್ಯಕ್ರಮದ ಅವಧಿಯು ಐದರಿಂದ ಆರು ತಿಂಗಳುಗಳು. ತರಗತಿಗಳನ್ನು ಹೈಬ್ರಿಡ್ ಮೋಡ್‌ನಲ್ಲಿ ನಡೆಸಲಾಗುವುದು, ಅದು ವೈಯಕ್ತಿಕವಾಗಿ ಕ್ಯಾಂಪಸ್ ಸೆಷನ್‌ಗಳು ಮತ್ತು ಲೈವ್, ಆನ್‌ಲೈನ್ ಸೆಷನ್‌ಗಳನ್ನು ಒಳಗೊಂಡಿರುತ್ತದೆ. IIM ಬೆಂಗಳೂರು ಕ್ಯಾಂಪಸ್ ತರಬೇತಿ ಸಮಯದಲ್ಲಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಅನ್ನು ಸುಗಮಗೊಳಿಸುತ್ತದೆ. ಕಾರ್ಯಕ್ರಮವನ್ನು ಇಂಗ್ಲಿಷ್ ಭಾಷೆಯಲ್ಲಿ ನೀಡಲಾಗುತ್ತದೆ. ಪ್ರಶಿಕ್ಷಣಾರ್ಥಿಗಳ ಹಾಜರಾತಿಯ ಆಧಾರದ ಮೇಲೆ ರಾಜ್ಯ ಸರ್ಕಾರವು ಅಭ್ಯರ್ಥಿಗಳಿಗೆ ಪ್ರಯಾಣ ವೆಚ್ಚಕ್ಕಾಗಿ ಸ್ಟೈಫಂಡ್ ಅನ್ನು ಸಹ ನೀಡುತ್ತದೆ. 200 ಎಸ್‌ಸಿ ಅಭ್ಯರ್ಥಿಗಳು ಮತ್ತು 100 ಎಸ್‌ಟಿ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಸರ್ಕಾರ ಉದ್ದೇಶಿಸಿದ್ದು, ತಲಾ 75 ಭಾಗವಹಿಸುವವರ ನಾಲ್ಕು ಬ್ಯಾಚ್‌ಗಳನ್ನು ರಚಿಸಲಾಗುವುದು. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಮತ್ತು ಎಸ್ಟಿ ಕಲ್ಯಾಣ ಇಲಾಖೆಯಿಂದ ಆಯ್ಕೆಯಾದ 300 ಅಭ್ಯರ್ಥಿಗಳಿಗೆ ಕಾರ್ಯಕ್ರಮವನ್ನು ಪ್ರಾಯೋಜಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
IIMB invited applications from sc st women graduates for entrepreneurship training.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X