ದಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ದೆಹಲಿ ನಡೆಸುವ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಇದೀಗ ಡೌನ್ಲೋಡ್ ಮಾಡಿಕೊಳ್ಳಬಹುದು.
ಐಐಟಿಗಳು ಮತ್ತು ಐಐಎಸ್ಸಿಗಳಲ್ಲಿ ಪದವಿಪೂರ್ವ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಜೆಇಇ ಅಡ್ವಾನ್ಸ್ಡ್ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ವರ್ಷ ಒಟ್ಟು 1,60,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ:
ಸ್ಟೆಪ್ 1: ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್ ಅಧಿಕೃತ ವೆಬ್-ಸೈಟ್ http://jeeadv.ac.in/ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ನಲ್ಲಿ ಲಭ್ಯವಿರುವ "Download Admit Card of JEE Advanced Clik Here" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂಬರ್, ಜನ್ಮ ದಿನಾಂಕ ಮತ್ತು ಮೊಬೈಲ್ ನಂಬರ್ ನೀಡಿ
ಸ್ಟೆಪ್ 4: "SUBMIT" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.