ಭಾರತೀಯ ಏರ್ಫೋರ್ಸ್ ಏರ್ಮೆನ್ (ಗ್ರೂಪ್ X ಮತ್ತು Y ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಟಕಣೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೇಸ್ I ಪರೀಕ್ಷಾ ನಡೆಸಿದ್ದು ಅದರ ಫಲಿತಾಂಶ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಿರುತ್ತದೆ . ಫೇಸ್ I ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೇಸ್ II ಪರೀಕ್ಷೆ ನಡೆಯಲಿದ್ದು,ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಐಎಎಫ್ ನೇಮಕಾತಿ 2019: ಏರ್ ಮೆನ್ (ಗ್ರೂಪ್ X ಮತ್ತು ಗ್ರೂಪ್ Y ಟ್ರೇಡ್ಸ್ ) ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಏರ್ಫೋರ್ಸ್ ಏರ್ಮೆನ್ (ಗ್ರೂಪ್ X ಮತ್ತು Y ) ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಭಾರತೀಯ ಏರ್ಫೋರ್ಸ್ ನ ಅಧಿಕೃತ ವೆಬ್ ಸೈಟ್ https://airmenselection.cdac.in/CASB/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್ ನಲ್ಲಿ ಕಾಣಿಸುವ Candidate ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನೀಡಲಾಗಿರುವ "Login (For Intake 1/2020)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ ನಿಮ್ಮ ಮೇಲ್ ಐಡಿ ಮತ್ತು ಪಾಸ್ವರ್ಡ್ ನೀಡಿ ಸೈನ್ ಇನ್ ಆಗಿ
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ
ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಐಎಎಫ್ ಏರ್ಮೆನ್ ಗ್ರೂಪ್ Xಮತ್ತು ಗ್ರೂಪ್ Y ಹುದ್ದೆಗಳ ಪರೀಕ್ಷಾ ರಿಸಲ್ಟ್ ಔಟ್
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ