ಭಾರತೀಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ತರಬೇತಿಯನ್ನು ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಗಸ್ಟ್ 8,2019 ಅಂದರೆ ಇಂದು ಸಂಜೆ 5 ಗಂಟೆಯೊಳಗೆ ಆನ್-ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಅರ್ಹತೆಗಳು:
ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಕೊಡಗು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಸೈನಿಕ ರ್ಯಾಲಿ ನಡೆಯುತ್ತಿದ್ದು, ಸೇನಾ ಅಧಿಸೂಚನೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ,ಕೊಡಗು,ಚಿತ್ರದುರ್ಗ,ಹಾಸನ್ , ಬಳ್ಳಾರಿ,ಬೆಳಗಾವಿ,ರಾಯಚೂರು,ಬೀದರ್,ಕೊಪ್ಪಳ,ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗಳಿಗೆ ಸೇರಿರಬೇಕು.
ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಮತ್ತು 2ಎ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.1.00 ಲಕ್ಷ.
ವಿದ್ಯಾರ್ಹತೆ:
10 ನೇ ತರಗತಿ ಉತ್ತೀರ್ಣರಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ಅಂಕಗಳನ್ನು ಪಡೆದಿರಬೇಕು.
ಆಯ್ಕೆ ವಿಧಾನ:
ರ್ಯಾಲಿಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಅಗತ್ಯ ಮೂಲ ದಾಖಲಾತಿಗಳನ್ನು ತರಲೇಬೇಕು. ಮೊದಲ ಹಂತದಲ್ಲಿ ದಾಖಲಾತಿ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಸದೃಢತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ಆಯೋಜಿಸಿ, ಅಂತಿಮವಾಗಿ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.
ತರಬೇತಿಯ ಅವಧಿ : 45 ದಿನಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 8,2019ರ ಸಂಜೆ 5 ಗಂಟೆ
ಅಧಿಕೃತ ವೆಬ್‌ಸೈಟ್ : http://www.backwardclasses.kar.nic.in/
ಸಹಾಯವಾಣಿ : 080-8050770004
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ


Click it and Unblock the Notifications











