ಭಾರತೀಯ ಕೋಸ್ಟ್ ಗಾರ್ಡ್ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಬಹುದು.
ಭಾರತೀಯ ಕೋಸ್ಟ್ ಗಾರ್ಡ್ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಡಿಸೆಂಬರ್ 27,2020ರೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಆಯ್ಕೆ ಮತ್ತು ಅಂತಿಮ ಆಯ್ಕೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರಿಲಿಮಿನರಿ ಆಯ್ಕೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ https://joinindiancoastguard.cdac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ರಿಜಿಸ್ಟ್ರೇಶನ್ ಸಂಖ್ಯೆ ಮತ್ತು ಇ-ಮೇಲ್ ಐಡಿ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
For Quick Alerts
For Daily Alerts