National Flag : ನಮ್ಮ ರಾಷ್ಟ್ರಧ್ವಜದ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು

ನಮ್ಮ ರಾಷ್ಟ್ರಧ್ವಜವು ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ.

By Kavya

ದೇಶಪ್ರೇಮದ ಸಂಕೇತವಾಗಿರುವ ನಮ್ಮ ತ್ರಿವರ್ಣ ಧ್ವಜ ಹಲವು ವಿಶೇಷತೆಗಳಿಂದ ಕೂಡಿದೆ. ಹಲವು ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ನಾಯಕರು ಸೇರಿ ನಮ್ಮ ರಾಷ್ಟ್ರಧ್ವಜಕ್ಕೆ ಸುಂದರ ರೂಪ ನೀಡಿದ್ದಾರೆ.

ಪಿಂಗಳಿ ವೆಂಕಯ್ಯನವರಿಂದ ರೂಪುಗೊಂಡ ನಮ್ಮ ಧ್ವಜಕ್ಕೆ ಅದರದ್ದೇ ಆದ ಕೆಲವು ವಿಶೇಷತೆಗಳಿವೆ. ಧ್ವಜದ ವಿನ್ಯಾಸ, ಅಳತೆ, ಹಿರಿಮೆ ಸೇರಿದಂರೆ ನಮ್ಮ ರಾಷ್ಟ್ರಧ್ವಜದ ಬಗೆಗಿನ ಅನೇಕ ವಿಚಾರಗಳನ್ನು ತಿಳಿಸುವುದೇ ಈ ಲೇಖನದ ಉದ್ದೇಶ.

ತ್ರಿವರ್ಣ ಧ್ವಜದ ವಿಶೇಷತೆ

ನಮ್ಮ ರಾಷ್ಟ್ರಧ್ವಜವು ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ.

ಸರ್ವಪಳ್ಳಿ ರಾಧಾಕೃಷ್ಣನ್ ತ್ರಿವರ್ಣಕ್ಕೆ ನೀಡಿರುವ ಅರ್ಥ

ಕೇಸರಿ: ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
ಬಿಳಿಬಣ್ಣ: ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
ಹಸಿರು ಬಣ್ಣ: ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ.

ಧ್ವಜದ ತಯಾರಿ

ರಾಷ್ಟ್ರಧ್ವಜವನ್ನು ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ. ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

ಇದನ್ನು ಗಮನಿಸಿ: ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ರೂಪುಗೊಂಡ ಬಗೆ

ಗೌರವ ಸೂಚನೆ

  • ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಜನಗಣ ಮನವನ್ನು ಹಾಡಲೇಬೇಕು.
  • ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  • ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  • ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  • ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  • ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  • ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  • ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದ್ದು.
  • ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು.
  • ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.

ತಾಯಿ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

For Quick Alerts
ALLOW NOTIFICATIONS  
For Daily Alerts

English summary
The colors and symbols of the Indian National flag hold deep philosophical meaning. Each color represents a specific aspect of Indian culture that resonates deeply within the hearts of the citizens.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X