ಭಾರತೀಯ ನೌಕಾಪಡೆ ನಾವಿಕ 2500ಸೀನಿಯರ್ ಸೆಕೆಂಡರಿ ರಿಕ್ರ್ಯುಟ್ ,500 ಆರ್ಟಿಫೈಸರ್ ಅಪ್ರೆಂಟಿಸ್ (ಎಎ) ಮತ್ತು 400 ಮೆಟ್ರಿಕ್ ರಿಕ್ರ್ಯುಟ್ (ಎಂಆರ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಟಕಣೆ ಹೊರಡಿಸಿತ್ತು. ಈಗಾಗಲೇ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಇದೀಗ ಫಿಸಿಕಲ್ ಫಿಟ್ನೆಸ್ ಪರೀಕ್ಷೆ (ಪಿಎಫ್‌ಟಿ) ಯನ್ನು ನಡೆಸಲಾಗುತ್ತಿದ್ದು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪಿಎಫ್‌ಟಿ ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಭಾರತೀಯ ನೌಕಾಪಡೆ ಎಸ್‌ಎಸ್‌ಆರ್,ಎಎ ಮತ್ತು ಎಂಆರ್ ಹುದ್ದೆಗಳ ಪಿಎಫ್‌ಟಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಆರ್‌ಪಿಎಫ್ ನ ಅಧಿಕೃತ ವೆಬ್ ಸೈಟ್ https://www.joinindiannavy.gov.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್ ನಲ್ಲಿ ಕಾಣಿಸುವ "Login" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ ನಿಮ್ಮ ಮೇಲ್ ಐಡಿ ಮತ್ತು ಪಾಸ್‌ವರ್ಡ್ ನೀಡಿ
ಸ್ಟೆಪ್ 4: ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











