ಪದವಿ ಕಾಲೇಜುಗಳಲ್ಲಿ ಸಿಸಿಟಿವಿ ಮತ್ತು ಸಮವಸ್ತ್ರ ಕಡ್ಡಾಯಕ್ಕೆ ಸೂಚನೆ

Posted By:

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತಿತರರ ಪ್ರಕರಣಗಳು ಹೆಚ್ಚುತ್ತಿದ್ದು, ಈ ಸಂಬಂಧ ವಿದ್ಯಾರ್ಥಿನಿಯರು, ಪೋಷಕರುಗಳಿಂದ ಸರ್ಕಾರಕ್ಕೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಗೆ‌ ಸಿಸಿಟಿವಿ ಅಳವಡಿಕೆಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ

ಈ ಹಿಂದೆ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಆದೇಶ ನೀಡಲಾಗಿತ್ತು ಅದೇ ರೀತಿ ಈಗ ಪದವಿ ಕಾಲೇಜುಗಳಲ್ಲೂ ಸಿಸಿಟಿವಿ ಅಳವಡಿಸಲು ಸೂಚಿಸಲಾಗಿದೆ.

ಸಿಸಿಟಿವಿ ಮತ್ತು ಸಮವಸ್ತ್ರ ಕಡ್ಡಾಯಕ್ಕೆ ಸೂಚನೆ

ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಪ್ರಯೋಗಾಲಯಗಳಲ್ಲಿ ಸಮವಸ್ತ್ರವನ್ನು ಧರಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಒಳಾಡಳಿತ ಇಲಾಖೆಗಳು ನೀಡಿರುವ ಸೂಚನೆಗಳಂತೆ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ

ಕಾಲೇಜಿನಲ್ಲಿರುವ ಕಾಲೇಜು ಅಭಿವೃದ್ಧಿ ನಿಧಿ, ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ಓದುವ ಕೊಠಡಿಗಳ (ರೀಡಿಂಗ್ ರೂಂ) ನಿರ್ವಹಣೆಗಾಗಿ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕ ಹಾಗೂ ಇನ್ನಿತರೆ ಲಭ್ಯವಿರುವ ಅನುದಾನದಲ್ಲಿ ಸಿಸಿಟಿವಿಗೆ ತಗಲುವ ವೆಚ್ಚವನ್ನು ಭರಿಸಿ ಒಂದು ತಿಂಗಳ ಅವಧಿಯೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಕಡ್ಡಾಯ ಸಮವಸ್ತ್ರ

ಪ್ರಯೋಗಾಲಯ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಬೋಧಕರು ಕಡ್ಡಾಯವಾಗಿ ಪ್ರಯೋಗಾಲಯ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಲಾಗಿದೆ.

ಒಂದು ವೇಳೆ ಸಮವಸ್ತ್ರ ಧರಿಸದೆ ಪ್ರಯೋಗಾಲಯಕ್ಕೆ ಬಂದಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.

English summary
Department of collegiate education sent circular to all govt and aided first grade colleges to install cctv cameras compulsory.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia