ಭಾರತೀಯ ತೈಲ ನಿಗಮ 2019ರ ಅಪ್ರೆಂಟಿಸ್ ಮತ್ತು ಡಾಟಾ ಎಂಟ್ರಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನಿಗಮವು ಒಟ್ಟು 380 ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 22,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಹಾಗೆಯೇ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಲಾಗಿತ್ತು. ಅದರಂತೆಯೇ ಇದೇ ಡಿಸೆಂಬರ್ 8,219ರಂದು ಲಿಖಿತ ಪರೀಕ್ಷೆಯು ನಡೆಯುತ್ತಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.
ಐಓಸಿಎಲ್ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಅನುಸರಿಸಿ :
ಸ್ಟೆಪ್ 1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಭಾರತೀಯ ತೈಲ ನಿಗಮದ ಅಧಿಕೃತ ವೆಬ್‌ಸೈಟ್ https://www.iocl.com/home.aspx ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Careers ಕೆಳಗಿರುವ Latest Job Openings ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "IOCL Apprentice Exam Admit Card 2019" ರ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪರದೆಯ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗಿರಬೇಕಿರುತ್ತದೆ. ಪರೀಕ್ಷೆಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.


Click it and Unblock the Notifications











