IOCL Written Exam Result 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

 
ಐಓಸಿಎಲ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಪ್ರಕಟ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಒಟ್ಟು 469 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ನವೆಂಬರ್ 21,2021ರಂದು ನಡೆದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಇದೀಗ ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಒಸಿಎಲ್ ಲಿಖಿತ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಒಸಿಎಲ್ ಅಧಿಕೃತ ವೆಬ್‌ಸೈಟ್‌ https://iocl.com/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕರಿಯರ್ ವಿಭಾಗದ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಪ್ರೆಂಟಿಸ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಫಲಿತಾಂಶದ ಪಿಡಿಎಫ್ ಅನ್ನು ವೀಕ್ಷಿಸಿ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಿದ ಬಳಿಕ ಅಭ್ಯರ್ಥಿಗಳು ಮುಂದಿನ ರೆಫರೆನ್ಸ್ ಗಾಗಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
IOCL released written exam 2021 result for apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X