IOCL Written Exam Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀಯ ತೈಲ ನಿಗಮ ನಿಯಮಿತ (ಐಒಸಿಎಲ್) 2022ರ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಒಸಿಎಲ್ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 300 ಟ್ರೇಡ್ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ 10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಐಟಿಐ ವಿದ್ಯಾರ್ಹತೆ ; 12ನೇ ತರಗತಿ; ಡಿಪ್ಲೋಮಾ ಮತ್ತು ಪದಿವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ನವೆಂಬರ್ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಓಬಿಸಿ ಯ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಇದೀಗ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಒಸಿಎಲ್ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಐಒಸಿಎಲ್ ಅಧಿಕೃತ ವೆಬ್‌ಸೈಟ್‌ https://iocl.com/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಐಒಸಿಎಲ್ ಲಿಖಿತ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL released written examination admit card 2022 for trade and technician apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+