6 New ITI Courses : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, 6 ಹೊಸ ಐಟಿಐ ಕೋರ್ಸ್ ಸೇರ್ಪಡೆ

ಪ್ರಸಕ್ತ ಸಾಲಿನಿಂದ ಐಟಿಐಗೆ 6 ಹೊಸ ಕೋರ್ಸ್ಗಳನ್ನು ಸೇರ್ಪಡೆ ಮಾಡಲಾಗಿದೆ. ಇದಕ್ಕೆ ರಾಜ್ಯ ವೃತ್ತಿ ಶಿಕ್ಷಣ ಪರಿಷತ್ ಅನುಮೋದನೆ ನೀಡಿದೆ. ಪ್ರಸಕ್ತ ಸಾಲಿನಿಂದ ಹೊಸ ಕೋರ್ಸ್‌ಗೆ ಸೇರಲು ಅವಕಾಶ ನೀಡಲಾಗುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

6 ಹೊಸ ಐಟಿಐ ಕೋರ್ಸ್ ಸೇರ್ಪಡೆ : ಉನ್ನತ ಶಿಕ್ಷಣ ಇಲಾಖೆ ಘೋಷಣೆ

ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು 6 ಹೊಸ ಕೋರ್ಸ್‌ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಮಂಗಳವಾರ ಅನುಮೋದನೆ ನೀಡಿದೆ.

ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ನಿರ್ಣಯವು ಎಲ್ಲಾ 150 ಐ.ಟಿ.ಐ.ಗಳಿಗೆ ಅನ್ವಯವಾಗಲಿದ್ದು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಐಟಿಐ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಹೆಚ್ಚಾಗಿವೆ ಹೀಗಾಗಿ ಅನೇಕ ವಿದ್ಯಾರ್ಥಿಗಳು ಐಟಿಐ ಕಲಿಕೆಗೆ ಮುಂದೆ ಬರುತ್ತಿದ್ದಾರೆ. ಹೀಗಾಗಿ ಕೈಗಾರಿಕೆಯಲ್ಲಿ ಉದ್ಯೋಗಕ್ಕೆ ಅನುಕೂಲವಾಗುವಂತೆ ಹೊಸದಾಗಿ ಆರು ಕೋರ್ಸ್‌ಗಳನ್ನು ಸೇರಿಸಲಾಗಿದೆ. ಆ ಮೂಲಕ ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಹೊಸ ಭರವಸೆಯನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ.

ITI ಗೆ 6 ಹೊಸ ಕೋರ್ಸ್‌ಗಳ ಸೇರ್ಪಡೆಯ ವಿವರ:

ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (2 ವರ್ಷ)
ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ (2 ವರ್ಷ)
ಅಡ್ವಾನ್ಸ್ಡ್ ಮ್ಯಾನಫ್ಯಾಕ್ಚರಿಂಗ್ (1 ವರ್ಷ)
ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ)
ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನಫ್ಯಾಕ್ಚರ್ (1 ವರ್ಷ)
ಮ್ಯಾನಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ (1 ವರ್ಷ)
ಈ 6 ಸಂಯೋಜನೆಗಳು ಐ.ಟಿ.ಐ.ಗೆ ಸೇರ್ಪಡೆಯಾಗುತ್ತವೆ ಎಂದು ಅಶ್ವಥ್ ನಾರಾಯಣ ವಿವರಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಆಯ್ದ ಐಟಿಐಗಳನ್ನು 'ಟೆಕ್ನಾಲಜಿ ಹಬ್ಸ್' ಆಗಿ ಪರಿವರ್ತಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ರಾಜ್ಯ ವೃತ್ತಿಪರ ತರಬೇತಿ ಕೌನ್ಸಿಲ್ (SCVT) ಹೊಸ ಸಂಯೋಜನೆಗಳನ್ನು ಅನುಮೋದಿಸಿದೆ ಎಂದಿದ್ದಾರೆ.

ಅಂತಿಮವಾಗಿ ಈ ಸಂಯೋಜನೆಗಳಿಗೆ ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ (ಎನ್.ಸಿ.ವಿ.ಇ.ಟಿ.) ಮಾನ್ಯತೆ ಕೊಡಬೇಕು. ಅದಕ್ಕೆ ಪೂರಕವಾಗಿ ಈ 6 ಸಂಯೋಜನೆಗಳಿಗಾಗಿ ಸಿದ್ಧಪಡಿಸಲಾಗಿರುವ ಪಠ್ಯಕ್ರಮಕ್ಕೆ ನವದೆಹಲಿಯ ತರಬೇತಿ ಮಹಾನಿರ್ದೇಶನಾಲಯದಿಂದ (ಡಿ.ಜಿ.ಟಿ.) ಅನುಮೋದನೆ ಪಡೆಯಬೇಕಾಗಿರುತ್ತದೆ. ಈಗ ರಾಜ್ಯ ಸರ್ಕಾರವು ಈ ಸಂಯೋಜನೆಗಳ ಪಠ್ಯಕ್ರಮವನ್ನು ಡಿ.ಜಿ.ಟಿ.ಗೆ ಸಲ್ಲಿಸಿದ್ದು, ಅದು ಪ್ರಕ್ರಿಯೆಯಲ್ಲಿದೆ. ಆದರೆ, ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಎನ್.ಸಿ.ವಿ.ಇ,ಟಿ.ಯಿಂದ ಈ 6 ಸಂಯೋಜನೆಗಳಿಗೆ ಮಾನ್ಯತೆ ಪಡೆಯುವ ಷರತ್ತಿಗೊಳಪಟ್ಟು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದೂ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಈ ಸಭೆಯಲ್ಲಿ 3 ತಿಂಗಳ ಅವಧಿಯ 23 ಅಲ್ಪಾವಧಿ ಪ್ರಮಾಣಪತ್ರ ಕೋರ್ಸ್‌ಗಳಿಗೆ ಕೂಡ ಎಸ್.ಸಿ.ವಿ.ಟಿ.ಯು ಅನುಮೋದನೆ ನೀಡಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತ ಡಾ.ಹರೀಶ್ ಕುಮಾರ್ ಕೆ. ಮತ್ತಿತರರು ಇದ್ದರು.

More News  

For Quick Alerts
ALLOW NOTIFICATIONS  
For Daily Alerts

English summary
Department of higher education karnataka has announced addition of 6 new courses combinations for students who are joining ITIs.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+