
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಬೆಂಗಳೂರು, ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಜಂಟಿ ಪ್ರವೇಶ ಪರೀಕ್ಷೆಗೆ (ಜೆಎಎಂ) ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದೆ.
ಈ ಮುಂಚೆ ಅರ್ಜಿ ಸಲ್ಲಿಸಲು ಮೇ 20,2021ರ ವರೆಗೆ ಅವಕಾಶ ನೀಡಲಾಗಿತ್ತು. ಈಗ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ನಲ್ಲಿ ಸ್ನಾತಕೋತ್ತರ ಮತ್ತು ಸಂಯೋಜಿತ ಪಿಎಚ್‌ಡಿ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ರಿಜಿಸ್ಟರ್ ಮಾಡಲು ಮೇ 27,2021ರ ವರೆಗೆ ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಜೆಎಎಂ 2021ರ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಮತ್ತು ಕಟ್ ಆಫ್ ಅಂಕಗಳಿಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಐಐಟಿಗಳಲ್ಲಿ ಎಂಎಸ್ಸಿ (ಎರಡು ವರ್ಷ), ಜಂಟಿ ಎಂಎಸ್ಸಿ-ಪಿಎಚ್ಡಿ, ಎಂಎಸ್ಸಿ-ಪಿಎಚ್ಡಿ ಡ್ಯುಯಲ್ ಪದವಿ ಮತ್ತು ಇತರ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ ಮತ್ತು ಐಐಎಸ್ಸಿಯಲ್ಲಿ ಇಂಟಿಗ್ರೇಟೆಡ್ ಪಿಎಚ್ಡಿ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಜೆಎಎಂ ಪ್ರವೇಶಾತಿ ಪ್ರಕ್ರಿಯೆ: ರಿಜಿಸ್ಟರ್ ಮಾಡುವುದು ಹೇಗೆ ?
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://jam.iisc.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ಎನ್‌ರೋಲ್ಮೆಂಟ್ ಐಡಿ/ ಇಮೇಲ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ನಂತರ ಅಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಸಬ್‌ಮಿಟ್ ಮಾಡಿ
ಸ್ಟೆಪ್ 5: ಎಲ್ಲವೂ ಪೂರ್ಣಗೊಂಡ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ


Click it and Unblock the Notifications











