JEE Advanced 2021 Postponed: ಕೋವಿಡ್ ಹಿನ್ನೆಲೆಯಲ್ಲಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಮುಂದೂಡಿಕೆ

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಮುಂದೂಡಿಕೆ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನ ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯನ್ನು ಮುಂದೂಡಲಾಗಿದೆ.

 

ಈ ಭಾರಿ ಐಐಟಿ ಕಾರಗ್‌ಪುರ್ ಸಂಸ್ಥೆಯು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಆಯೋಜಿಸಲಿದ್ದು, ಕೋವಿಡ್ ಬಿಕ್ಕಟ್ಟಿನ ಕಾರಣದಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 30ರಂದು ನಿಗದಿಪಡಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷಾ ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಿದ್ದು, ವಿದ್ಯಾರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

ಮೂಲಗಳ ಪ್ರಕಾರ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 2.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಲಿಖಿತ ಪರೀಕ್ಷೆಯು ಪೇಪರ್ 1 ಮತ್ತು ಪೇಪರ್ 2 ಎಂಬ ಎರಡು ಪತ್ರಿಕೆಗಳನ್ನು ಒಳಗೊಂಡಿದೆ. ದೇಶಾದ್ಯಂತ ಹಬ್ಬಿರುವ 23 ಐಐಟಿಗಳಲ್ಲಿ ಬ್ಯಾಚುಲರ್, ಇಂಟಿಗ್ರೇಟೆಡ್ ಸ್ನಾತಕೋತ್ತರ ಮತ್ತು ಡ್ಯುಯಲ್ ಡಿಗ್ರಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ವಿದ್ಯಾರ್ಥಿಗಳು 12 ನೇ ತರಗತಿಯಲ್ಲಿ ಕನಿಷ್ಠ 75% ಅಂಕಗಳನ್ನು ಅಥವಾ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಇನ್ನಾವುದೇ ಭಾಷೆಯೊಂದಿಗೆ ಸಮಾನ ಪರೀಕ್ಷೆಯನ್ನು ಪಡೆಯಬೇಕು. ಆದಾಗ್ಯೂ, COVID-19 ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ 75% ಅರ್ಹತಾ ಮಾನದಂಡಗಳನ್ನು ಸಡಿಲಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
IIT kharagpur postponed JEE advanced 2021 due to rise in covid19 cases.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X