ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಸೆಪ್ಟೆಂಬರ್ ನಲ್ಲಿ ನಡೆಸುವ ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭಾರತದೆಲ್ಲೆಡೆ ಸೆಪ್ಟೆಂಬರ್ 1 ರಿಂದ 6,2020ರ ವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.

ಜೆ ಇ ಇ ಪರೀಕ್ಷೆ:
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಪರೀಕ್ಷೆಯು ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಈ ಪರೀಕ್ಷೆಗಳು ಸಹಕಾರಿಯಾಗಿವೆ. ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.
ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ:
ಸ್ಟೆಪ್ 1: ಜೆಇಇ ಅಧಿಕೃತ ವೆಬ್-ಸೈಟ್ https://jeemain.nta.nic.in/ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card of JEE (Main) April/September -2020" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ಭರ್ತಿ ಮಾಡಿ
ಸ್ಟೆಪ್ 4: "SUBMIT" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











