
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ (ಜೆಇಇ) ಮುಖ್ಯ ಪರೀಕ್ಷೆ 2021ರ ಮೇ ಸೆಶನ್ ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಇಂದು ಪ್ರಕಟಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಆಗಾಗ್ಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು ಎಂದು ಹೇಳಿದ್ದಾರೆ.
ಜೆಇಇ ಮುಖ್ಯ ಮೇ ಪರೀಕ್ಷೆಯು ಮೇ 24 ರಿಂದ ಮೇ 28,2021ರ ವರೆಗೆ ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್‌ಟಿಎ) ತಿಳಿಸಿದೆ.
ಜೆಇಇ ಮುಖ್ಯ 2021 ಏಪ್ರಿಲ್ ಸೆಶನ್ ಪರೀಕ್ಷೆಯನ್ನು ಏಪ್ರಿಲ್ 27 ರಿಂದ 30ರ ವರೆಗೆ ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಕೂಡ ಮುಂದೂಡಲಾಗಿತ್ತು. ಈ ಎರಡೂ ಸೆಶನ್ ನ ಪರೀಕ್ಷೆಗಳ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ.


Click it and Unblock the Notifications