ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ಮೈನ್ಸ್ ಸೆಶನ್ 4ರ ಫಲಿತಾಂಶ ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಭಾರತದೆಲ್ಲೆಡೆ ಜೆಇಇ ಪ್ರಮುಖ 4ನೇ ಸೆಶನ್ ಪರೀಕ್ಷೆಯನ್ನು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಆಗಸ್ಟ್ 26,27,31 ಮತ್ತು ಸೆಪ್ಟೆಂಬರ್ 1, 2,2021ರ ವರೆಗೆ ನಡೆಸಲಾಗಿತ್ತು. ಫಲಿತಾಂಶ ವೀಕ್ಷಿಸುವುದು ಹೇಗೆ ಎಂಬ ವಿವರವನ್ನು ತಿಳಿಯಲು ಮುಂದೆ ಓದಿ.

ಜೆಇಇ ಪ್ರಮುಖ 4ನೇ ಸೆಶನ್ ಪರೀಕ್ಷೆಯಲ್ಲಿ ಒಟ್ಟು 44 ವಿದ್ಯಾರ್ಥಿಗಳು 100ರಷ್ಟು ಫಲಿತಾಂಶವನ್ನು ಪಡೆದಿದ್ದಾರೆ. 18 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಜೆಇಇ ಪ್ರಮುಖ ಸೆಶನ್ 4ರ ಫಲಿತಾಂಶ ವೀಕ್ಷಿಸಬಹುದಾದ ವೆಬ್‌ಸೈಟ್ ಗಳು :
jeemain.nta.nic.in result 2021
ntaresults.nic.in result 2021
nta.ac.in result 2021
ಜೆಇಇ ಪ್ರಮುಖ ಸೆಶನ್ 4ರ ಫಲಿತಾಂಶ ವೀಕ್ಷಿಸುವುದು ಹೇಗೆ ? :
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ jeemain.nta.nic.in ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ನಿಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಜೆಇಇ ಪರೀಕ್ಷೆ:
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಪರೀಕ್ಷೆಯು ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಈ ಪರೀಕ್ಷೆಗಳು ಸಹಕಾರಿಯಾಗಿವೆ. ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.


Click it and Unblock the Notifications











